ADVERTISEMENT

ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:51 IST
Last Updated 21 ಜೂನ್ 2019, 19:51 IST

ನವದೆಹಲಿ: ಲೋಕಸಭಾ ಚುನಾವಣೆ ಸೋಲಿನಿಂದ ಧೈರ್ಯಗುಂದದ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಚುನಾವಣಾ ಸುಧಾರಣೆಗಳ ಬಗ್ಗೆ ಚರ್ಚಿಸಲು 12 ಪಕ್ಷಗಳು ಜಂಟಿಯಾಗಿ ನೋಟಿಸ್ ಸಲ್ಲಿಸಿವೆ.

ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಬಿಎಸ್‌ಪಿ, ಸಿಪಿಎಂ, ಸಿಪಿಐ, ಎಎಪಿ, ಆರ್‌ಜೆಡಿ, ಎನ್‌ಸಿಪಿ ಹಾಗೂ ಕೇರಳ ಕಾಂಗ್ರೆಸ್ ಪಕ್ಷಗಳು ನೋಟಿಸ್‌ಗೆ ಸಹಿ ಹಾಕಿದ್ದು, ಚರ್ಚೆಗೆ ಅನುಮೋದನೆ ಸಿಕ್ಕಿದೆ.

ತ್ರಿವಳಿ ತಲಾಖ್ ಮಸೂದೆಯು ರಾಜ್ಯಸಭೆಯಲ್ಲಿ ಮಂಡನೆಯಾದಾಗ, ತಮ್ಮ ಸಂಖ್ಯಾಬಲವನ್ನು ಬಳಸಿಕೊಂಡು, ಮಸೂದೆಯನ್ನು ಸ್ಥಾಯಿಸಮಿತಿ ಪರಿಶೀಲನೆಗೆ ಕಳುಹಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ.

ADVERTISEMENT

ಪರಿಶೀಲನೆಗೊಳಪಡದ ಮಸೂದೆಗಳನ್ನು ಬೆಂಬಲಿಸುವುದಿಲ್ಲ ಎಂದು ರಾಜ್ಯಸಭೆಯ ಸದನ ನಾಯಕರು ತಿಳಿಸಿದ್ದಾರೆ. ಮಸೂದೆಗಳು ಸಂಸದೀಯ ಸ್ಥಾಯಿ ಸಮಿತಿ ಅಥವಾ ರಾಜ್ಯಸಭೆಯ ಆಯ್ಕೆ ಸಮಿತಿಯಿಂದ ಪರಿಶೀಲನೆಗೆ ಒಳಗಾಗಬೇಕು ಎಂದು ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರಿಗೆ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.