ಡೆಹ್ರಾಡೂನ್(ಉತ್ತರಾಖಂಡ): ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಉತ್ತರಾಖಂಡದ ಆರು ಜಿಲ್ಲೆಗಳಿಗೆ ಸೋಮವಾರ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಡೆಹ್ರಾಡೂನ್, ತೆಹ್ರಿ, ಪೌರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರದ ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು–ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಎಚ್ಚರಿಸಿದೆ.
ಜಿಲ್ಲಾಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಕೇಂದ್ರವು ತಿಳಿಸಿದೆ.
ಏತನ್ಮಧ್ಯೆ, 1 ರಿಂದ 12ನೇ ತರಗತಿಯವರೆಗಿನ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.