ನವದೆಹಲಿ: 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಹೆಚ್ಚಿಸುತ್ತಲೇ ಬಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಕರ್ನಾಟಕದಲ್ಲಿ ಸರ್ಕಾರ ರಚಿಸಿದ ಬಳಿಕ ರಾಜ್ಯದ ಹಣವನ್ನು ಬೇರೆಡೆಗೆ ಕೊಂಡೊಯ್ಯುವ ಕಾಲವೊಂದಿತ್ತು. ಈಗ ಸಂಪನ್ಮೂಲವನ್ನು ನೇರವಾಗಿ ಕರ್ನಾಟಕದ ಅಭಿವೃದ್ಧಿಗೆ ವರ್ಗಾಯಿಸುವ ಪ್ರಾಮಾಣಿಕ ಯತ್ನ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.
ದೆಹಲಿ ಕರ್ನಾಟಕ ಸಂಘ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ‘ಬಾರಿಸು ಕನ್ನಡ ಡಿಂಡಿಮವಾ’ ಎಂಬ ಎರಡು ದಿನಗಳ ಸಾಮಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮೋದಿ ಮಾತನಾಡಿದರು.
ಆಡಳಿತಾರೂಢ ಬಿಜೆಪಿಗೆ ಕರ್ನಾಟಕದ ಅಭಿವೃದ್ಧಿಯೇ ಪ್ರಮುಖ ಆದ್ಯತೆಯಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಿ, 2009 ಮತ್ತು 2014ರ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ರಾಜ್ಯವು ವಾರ್ಷಿಕವಾಗಿ ₹11,000 ಕೋಟಿಯನ್ನು ಪಡೆದುಕೊಂಡಿದೆ. ಆದರೆ, ಈಗ ನಮ್ಮ ಸರ್ಕಾರದ ಅವಧಿಯಲ್ಲಿ ಅದು ₹30,000 ಕೋಟಿಗೆ ಏರಿದೆ ಎಂದರು.
ಇತ್ತೀಚಿನ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ₹7,000 ಕೋಟಿ ರೂಪಾಯಿ ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.