ADVERTISEMENT

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.45 ಕೋಟಿ ಡೋಸ್‌ ಲಭ್ಯ: ಆರೋಗ್ಯ ಇಲಾಖೆ

ಪಿಟಿಐ
Published 26 ಜೂನ್ 2021, 7:04 IST
Last Updated 26 ಜೂನ್ 2021, 7:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.45 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆಯ ಡೋಸ್‌ಗಳು ಲಭ್ಯವಿವೆ. ಮುಂದಿನ ಮೂರು ದಿನಗಳಲ್ಲಿ19,10,650 ಡೋಸ್‌ಗಳನ್ನು ನೀಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

‘ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ 31.17 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಿಸಿದೆ. ಇದರಲ್ಲಿ ‍ಪೋಲಾಗಿರುವ ಲಸಿಕೆ ಸೇರಿ ಒಟ್ಟು 29,71,80,733 ಡೋಸ್‌ಗಳನ್ನು ಉಪಯೋಗಿಸಲಾಗಿದೆ. ಇನ್ನೂ 1.45 ಕೋಟಿ (1,45,21,067) ಡೋಸ್‌ಗಳು ಬಾಕಿ ಉಳಿದಿವೆ ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT