ದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಟೆಂಟ್ ಕುಸಿದಿರುವ ದೃಶ್ಯ
ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದ್ದ ಟೆಂಟ್ ಕುಸಿದು 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ನೆಹರೂ ಕ್ರೀಡಾಂಗಣದ ಗೇಟ್ ನಂಬರ್ 2ರ ಬಳಿ ಅಳವಡಿಸಲಾಗಿದ್ದ ತಾತ್ಕಾಲಿಕ ಟೆಂಟ್ ಕುಸಿದು ಬಿದ್ದಿದೆ. ಅವಶೇಷಗಳಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.