ಇಂಡಿಗೊ ವಿಮಾನ (ಸಂಗ್ರಹ ಚಿತ್ರ)
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ನೂರಕ್ಕೂ ಅಧಿಕ ವಿಮಾನಗಳ ಸಂಚಾರ ವ್ಯತ್ಯಯವಾಗಿದೆ.
ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟ ಮಂಜು ಕವಿದಿದ್ದರಿಂದ ರನ್ ವೇ ಗೋಚರಿಸುತ್ತಿರಲಿಲ್ಲ. ಇದರಿಂದಾಗಿ, ಕಳೆದ ಮೂರು ದಿನಗಳಲ್ಲಿಯೂ ವಿಮಾನಗಳು ನಿಗದಿತ ಸಮಯಕ್ಕೆ ತಡವಾಗಿ ಸಂಚರಿಸಿವೆ. ಆದರೂ, ಯಾವುದೇ ವಿಮಾನಗಳನ್ನು ರದ್ದು ಅಥವಾ ಮಾರ್ಗ ಬದಲಾವಣೆ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನದಿಂದಾಗಿ ದೆಹಲಿ, ಅಮೃತಸರ, ಚಂಡೀಗಢ, ಕೋಲ್ಕತ್ತ ಹಾಗೂ ಲಖನೌ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸಂಚಾರ ವ್ಯತ್ಯಯವಾಗಿದೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆ ‘ಎಕ್ಸ್’ನಲ್ಲಿ ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದೆಹಲಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಪೋಸ್ಟ್ ಹಂಚಿಕೊಂಡಿದೆ.
'ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ. ಪ್ರಯಾಣಿಕರು ಬದಲಾದ ವಿಮಾನಗಳ ಹಾರಾಟದ ಸಮಯವನ್ನು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಿರಿ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.