ADVERTISEMENT

ಜಾರ್ಖಂಡ್‌: 100ಕ್ಕೂ ಹೆಚ್ಚು ಹಂದಿಗಳ ಸಾವು; ಆಫ್ರಿಕನ್‌ ಹಂದಿ ಜ್ವರ ಶಂಕೆ

ಜಾರ್ಖಂಡ್‌ನ ರಾಂಚಿಯಲ್ಲಿ ಅಲರ್ಟ್‌

ಪಿಟಿಐ
Published 6 ಆಗಸ್ಟ್ 2022, 14:36 IST
Last Updated 6 ಆಗಸ್ಟ್ 2022, 14:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಚಿ: ಜಾರ್ಖಂಡ್‌ನ ರಾಂಚಿ ಜಿಲ್ಲೆಯಲ್ಲಿ ಕಳೆದ ಜುಲೈ 27ರ ನಂತರ ಶಂಕಿತ ಆಫ್ರಿಕನ್‌ಹಂದಿ ಜ್ವರದ ಕಾರಣದಿಂದ 100ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿದ್ದು, ರಾಜ್ಯದ ಪಶು ಸಂಗೋಪನಾ ಇಲಾಖೆ ಎಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮಕೈಗೊಳ್ಳಲು ಎಲ್ಲಾ ಜಿಲ್ಲೆಗಳಿಗೆ ಸಲಹೆ ನೀಡಿದೆ ಎಂದು ಸರ್ಕಾರಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸೋಂಕಿತ ಹಂದಿಗಳ ಮಾದರಿಯನ್ನು ಭೋಪಾಲ್‌ನಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಹೈ ಸೆಕ್ಯುರಿಟಿ ಅನಿಮಲ್‌ ಡಿಸೀಸ್‌ ಮತ್ತು ಕೋಲ್ಕತ್ತದ ರೀಜನಲ್‌ ಡಿಸೀಸ್‌ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಂಚಿ ಜಿಲ್ಲೆಯಲ್ಲಿ ಮಾತ್ರ ಹಂದಿಗಳು ಮೃತಪಟ್ಟ ಪ್ರಕರಣಗಳು ವರದಿಯಾಗಿದೆ. ಆದಾಗ್ಯೂ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಪಶುಸಂಗೋಪನೆ ನಿರ್ದೇಶನಕ ಶಶಿ ಪ್ರಕಾಶ್‌ ಝಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.