ADVERTISEMENT

‘ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.19 ಕೋಟಿ ಕೋವಿಡ್‌ ಲಸಿಕೆ ಲಭ್ಯ’

ಪಿಟಿಐ
Published 8 ಜೂನ್ 2021, 10:08 IST
Last Updated 8 ಜೂನ್ 2021, 10:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.19 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆಯ ಡೋಸ್‌ಗಳು ಲಭ್ಯವಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ತಿಳಿಸಿದೆ.

‘ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ 24 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಣೆ ಮಾಡಿದೆ.

ಇದರಲ್ಲಿ ‍ಪೋಲಾಗಿರುವ ಲಸಿಕೆ ಸೇರಿ ಒಟ್ಟು 23,47,43,489 ಡೋಸ್‌ಗಳನ್ನು ಉಪಯೋಗಿಸಲಾಗಿದೆ. ಇನ್ನೂ 1,19,46,925 ಡೋಸ್‌ಗಳು ಬಾಕಿ ಉಳಿದಿವೆ’ ಎಂದು ಸಚಿವಾಲಯ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.