ADVERTISEMENT

ವಾರಾಣಸಿ ರೈಲು ನಿಲ್ದಾಣದಲ್ಲಿ ಬೆಂಕಿ: ‌150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ

ಪಿಟಿಐ
Published 30 ನವೆಂಬರ್ 2024, 7:36 IST
Last Updated 30 ನವೆಂಬರ್ 2024, 7:36 IST
   

ವಾರಾಣಸಿ (ಉತ್ತರ ಪ್ರದೇಶ): ವಾರಾಣಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ .

ಈ ಬಗ್ಗೆ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ಧಾವಿಸಿದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್), ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಘಟನೆಯ ಬಗ್ಗೆ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ವಿಷಾದ ವ್ಯಕ್ತಪಡಿಸಿದ್ದಾರೆ. ರೈಲ್ವೆ ನೌಕರರಿಗಾಗಿ ಪಾರ್ಕಿಂಗ್ ಸ್ಟ್ಯಾಂಡ್(ವಾಹನ ನಿಲುಗಡೆ) ನಿರ್ಮಿಸಲಾಗಿತ್ತು. ಅಗ್ನಿ ಅವಘಡದಿಂದ ಸಾಕಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.