ADVERTISEMENT

ರಾಜ್ಯಗಳಲ್ಲಿ 1.53 ಕೋಟಿ ಡೋಸ್‌ ಕೋವಿಡ್‌ ಲಸಿಕೆ ಲಭ್ಯ: ಕೇಂದ್ರ ಸರ್ಕಾರ

ಕೇಂದ್ರ ಆರೋಗ್ಯ ಸಚಿವಾಲಯ

ಪಿಟಿಐ
Published 12 ಜುಲೈ 2021, 6:09 IST
Last Updated 12 ಜುಲೈ 2021, 6:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದ ರಾಜ್ಯ, ಕೇಂದ್ರಾಡಳಿತ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.54 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳು ಬಳಕೆಗೆ ಲಭ್ಯ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 38.56 ಕೋಟಿ ಡೋಸ್‌ಗಳಷ್ಟು ಲಸಿಕೆಗಳನ್ನು ಪೂರೈಸಲಾಗಿದೆ. ಇನ್ನೂ 63,84,230 ಡೋಸ್‌ಗಳಷ್ಟು ಲಸಿಕೆಗಳು ಸಾಗಣೆ ಹಂತದಲ್ಲಿವೆ ಎಂದು ಸಚಿವಾಲಯ ತಿಳಿಸಿದೆ.

ವ್ಯರ್ಥವಾಗಿರುವ ಲಸಿಕೆಗಳೂ ಸೇರಿದಂತೆ ಒಟ್ಟು 37.31 ಕೋಟಿ ಡೋಸ್‌ ಲಸಿಕೆಗಳ ಬಳಕೆಯಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.