ADVERTISEMENT

1,550ಕ್ಕೂ ಹೆಚ್ಚು ಬೀದಿ ಮಕ್ಕಳ ರಕ್ಷಣೆ: ಸ್ಮೃತಿ ಇರಾನಿ

ಪಿಟಿಐ
Published 28 ಜುಲೈ 2023, 11:35 IST
Last Updated 28 ಜುಲೈ 2023, 11:35 IST
ಸ್ಮೃತಿ ಇರಾನಿ
ಸ್ಮೃತಿ ಇರಾನಿ   

ನವದೆಹಲಿ: ‘ಈ ವರ್ಷ ದೇಶದಾದ್ಯಂತ 1,550ಕ್ಕೂ ಹೆಚ್ಚು ಬೀದಿ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದರು.

ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗವು (ಎನ್‌ಸಿಪಿಸಿಆರ್‌) 1,551 ಮಕ್ಕಳನ್ನು ರಕ್ಷಣೆ ಮಾಡಿದೆ. ಬಳಿಕ, ಎನ್‌ಸಿಪಿಸಿಆರ್‌ ಆಯಾ ಪ್ರದೇಶದ ಮಕ್ಕಳ ಕಲ್ಯಾಣಾಭಿವೃದ್ಧಿ ಸಮಿತಿಗೆ ಮಕ್ಕಳನ್ನು ಹಸ್ತಾಂತರಿಸಿದ್ದು, ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT