ನವದೆಹಲಿ (ಪಿಟಿಐ): 2018-2023ರ ಅವಧಿಯಲ್ಲಿ ಒಬಿಸಿ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ 19,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯ, ಐಐಟಿ ಮತ್ತು ಐಐಎಂಗಳಿಂದ ಹೊರಗುಳಿದಿದ್ದಾರೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.
ಕೇಂದ್ರ ಶಿಕ್ಷಣ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಅವರು ರಾಜ್ಯಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ
ಲಭ್ಯವಿರುವ ದಾಖಲೆ ಪ್ರಕಾರ, ಕೇಂದ್ರೀಯ ವಿಶ್ವವಿದ್ಯಾಲಯಗಳು, ಐಐಟಿ ಮತ್ತು ಐಐಎಂಗಳಲ್ಲಿ ವಿವಿಧ ಕೋರ್ಸ್‌ಗಳಲ್ಲಿ 2018 ರಿಂದ 2023 ರ ವರೆಗೆ ಹೊರಗುಳಿದ ವಿದ್ಯಾರ್ಥಿಗಳ ಸಂಖ್ಯೆ 19,256.
ಈ ಅವಧಿಯಲ್ಲಿ ಮೂರು ವಿಭಾಗಗಳಿಂದ 14,446 ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ, 4,444 ವಿದ್ಯಾರ್ಥಿಗಳು ಐಐಟಿ ಮತ್ತು 366 ವಿದ್ಯಾರ್ಥಿಗಳು ಐಐಎಂಗಳಿಂದ ಹೊರಗುಳಿದಿದ್ದಾರೆ ಎಂದು ಸಚಿವರು ಹೇಳಿದರು.
‘ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಆಯ್ಕೆಗಳಿವೆ. ಅವರು ಒಂದೇ ಸಂಸ್ಥೆಯಲ್ಲಿ ಒಂದು ಕೋರ್ಸ್ ನಿಂದ ಇನ್ನೊಂದಕ್ಕೆ ವಲಸೆ ಹೋಗಲು ಆಯ್ಕೆ ಮಾಡುತ್ತಾರೆ’ ಎಂದರು.
‘ಶುಲ್ಕ ಕಡಿತ, ಹೆಚ್ಚಿನ ಸಂಸ್ಥೆಗಳ ಸ್ಥಾಪನೆ, ವಿದ್ಯಾರ್ಥಿವೇತನ, ರಾಷ್ಟ್ರಮಟ್ಟದ ವಿದ್ಯಾರ್ಥಿವೇತನಕ್ಕೆ ಆದ್ಯತೆಯ ಪ್ರವೇಶದಂತಹ ವಿವಿಧ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ‘ಐಐಟಿಗಳಲ್ಲಿ ಬೋಧನಾ ಶುಲ್ಕ ಮನ್ನಾ', ಕೇಂದ್ರ ವಲಯದ ಯೋಜನೆಯಡಿ ರಾಷ್ಟ್ರೀಯ ವಿದ್ಯಾರ್ಥಿವೇತನ ಮಂಜೂರು, ಸಂಸ್ಥೆಗಳಲ್ಲಿ ವಿದ್ಯಾರ್ಥಿವೇತನ ಇತ್ಯಾದಿ ಎಂದು ಸಚಿವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.