ADVERTISEMENT

ಉನ್ನತ ಶಿಕ್ಷಣದಲ್ಲಿ 23 ಸಾವಿರ ಕೋರ್ಸ್‌ ಉಚಿತ ಲಭ್ಯ: ಯುಜಿಸಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 15:54 IST
Last Updated 28 ಜುಲೈ 2022, 15:54 IST
   

ನವದೆಹಲಿ: ಕೃತಕ ಬುದ್ಧಿಮತ್ತೆ (ಎ.ಐ), ಸೈಬರ್‌ ಭದ್ರತೆ ಮತ್ತುಬಾಲ್ಯಾವಸ್ಥೆಯ ಆರೈಕೆ ಸೇರಿ 23 ಸಾವಿರ ಉನ್ನತ ಶಿಕ್ಷಣ ಕೋರ್ಸ್‌ಗಳು ಇಂಗ್ಲಿಷ್‌ ಸೇರಿ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಈಗ ಹೊಸ ವೆಬ್ ಪೋರ್ಟಲ್‌ನಲ್ಲಿ ಉಚಿತವಾಗಿ ಲಭಿಸಲಿವೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ತಿಳಿಸಿದೆ.

ದೇಶದ ಮೂಲೆಮೂಲೆಗೂ ಎಲ್ಲರಿಗೂ ಉನ್ನತ ಶಿಕ್ಷಣವನ್ನು ಡಿಜಿಟಲ್ ಸಂಪನ್ಮೂಲದ ಮೂಲಕ ಒದಗಿಸುವ ಗುರಿ ಹೊಂದಿರುವ ಜಾಲತಾಣವನ್ನು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಎರಡನೇ ವಾರ್ಷಿಕೋತ್ಸವದ ಭಾಗವಾಗಿ ಶುಕ್ರವಾರ ಪ್ರಾರಂಭಿಸಲಾಗುವುದು. ಉನ್ನತ ಶಿಕ್ಷಣದ ಉಚಿತ ಕೋರ್ಸ್‌ಗಳನ್ನುಮುಂಬರುವ 2022-23ರ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದುಯುಜಿಸಿ ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT