ADVERTISEMENT

ಮುಂಬೈ | ಥರ್ಮಲ್ ಸ್ಥಾವರದ ಟ್ಯಾಂಕ್‌ನಿಂದ ಹೊಗೆ; 30 ವಿದ್ಯಾರ್ಥಿಗಳು ಅಸ್ವಸ್ಥ

ಪಿಟಿಐ
Published 12 ಡಿಸೆಂಬರ್ 2024, 13:22 IST
Last Updated 12 ಡಿಸೆಂಬರ್ 2024, 13:22 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಜೆಎಸ್‌ಡಬ್ಲ್ಯು ಎನರ್ಜಿಯ ಥರ್ಮಲ್ ಪವರ್ ಘಟಕದ ಸಂಗ್ರಹಣಾ ಟ್ಯಾಂಕ್‌ನಿಂದ ಬಂದ ಹೊಗೆಯಿಂದಾಗಿ 30 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ವಿದ್ಯಾರ್ಥಿಗಳು ಜೈಗಡ ವಿದ್ಯಾ ಮಂದಿರ ಶಾಲೆಯವರಾಗಿದ್ದು, ಶಾಲೆಯಲ್ಲಿ ಒಟ್ಟು 250 ವಿದ್ಯಾರ್ಥಿಗಳಿದ್ದಾರೆ. ಪವರ್‌ ಘಟಕದ ಟ್ಯಾಂಕ್‌ ಸ್ವಚ್ಚಗೊಳಿಸುವ ವೇಳೆ ಬಂದ ಹೊಗೆಯಿಂದಾಗಿ ಸುಮಾರು 30ಕ್ಕೂ ಹೆಚ್ಚು ಮಕ್ಕಳ ಕಣ್ಣಿನಲ್ಲಿ ತೊಂದರೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.