ADVERTISEMENT

2019-21ರ ನಡುವೆ 35 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ: ಲೋಕಸಭೆಗೆ ಕೇಂದ್ರ ಮಾಹಿತಿ

ಪಿಟಿಐ
Published 6 ಡಿಸೆಂಬರ್ 2023, 2:18 IST
Last Updated 6 ಡಿಸೆಂಬರ್ 2023, 2:18 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ನವದೆಹಲಿ: 2019ರಿಂದ 2021ರವರೆಗೆ ದೇಶದಲ್ಲಿ ಸುಮಾರು 35 ಸಾವಿರ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ ಲೋಕಸಭೆಗೆ ತಿಳಿಸಿದ್ದಾರೆ.

ಸಾಮಾಜಿಕ ತಾರತಮ್ಯಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ದತ್ತಾಂಶವನ್ನು ಸದನದ ಮುಂದೆ ಪ್ರಸ್ತುತಪಡಿಸಿದ್ದಾರೆ.

ADVERTISEMENT

‘ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ ನಮ್ಮ ಬಳಿಯಿಲ್ಲ’ ಎಂದಿದ್ದಾರೆ.

ಅಂಕಿ ಅಂಶಗಳ ಪ್ರಕಾರ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ 2019ರಲ್ಲಿ 10,335, 2020ರಲ್ಲಿ 12,526 ಮತ್ತು 2021ರಲ್ಲಿ 13,089ಕ್ಕೆ ಏರಿದೆ.

ಸಾಮಾಜಿಕ ತಾರತಮ್ಯ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಮಾತನಾಡಿದ ಸಚಿವರು, ‘ಉನ್ನತ ಶಿಕ್ಷಣ ಇಲಾಖೆಯು ಶಿಕ್ಷಣ ಸಂಸ್ಥೆಗಳಲ್ಲಿ ಕೌನ್ಸೆಲಿಂಗ್ ಸೆಲ್‌ಗಳನ್ನು ಸ್ಥಾಪಿಸಿ ಅಧಿಕಾರಿಗಳನ್ನು ನೇಮಿಸಿದೆ. ಅಸ್ಪೃಶ್ಯತೆ, ತಾರತಮ್ಯದ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.