ದೇವೇಂದ್ರ ಫಡಣವೀಸ್
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಅವರು ಗುರುವಾರ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಮೂಲಕ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ದೇವೇಂದ್ರ ಫಡಣವೀಸ್ ಸಿದ್ಧರಾಗಿದ್ದಾರೆ.
ಕಾರ್ಯಕ್ರಮದಲ್ಲಿ ಮಹಾಯುತಿ (ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ) ಒಕ್ಕೂಟದ ಅಪಾರ ಬೆಂಬಲಿಗರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ರಾಜ್ಯ ಮೀಸಲು ಪೊಲೀಸ್ ಪಡೆ (ಎಸ್‌ಆರ್‌ಪಿಎಫ್), ಮತ್ತು ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ), ಗಲಭೆ ನಿಯಂತ್ರಣ ತಂಡ, ಡೆಲ್ಟಾ, ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ ಅನ್ನೂ ನಿಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.