ADVERTISEMENT

ದೇಶದ ವಿವಿಧ ಕೋರ್ಟ್‌ಗಳಲ್ಲಿ 4.70 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ 

ಪಿಟಿಐ
Published 25 ಮಾರ್ಚ್ 2022, 15:49 IST
Last Updated 25 ಮಾರ್ಚ್ 2022, 15:49 IST
ಪ್ರಜಾವಾಣಿ ವೆಬ್‌ಡೆಸ್ಕ್‌
ಪ್ರಜಾವಾಣಿ ವೆಬ್‌ಡೆಸ್ಕ್‌   

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿರುವ70,154 ಪ್ರಕರಣಗಳೂ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ 4.70 ಕೋಟಿಗೂ ಹೆಚ್ಚುಕೇಸುಗಳುಬಾಕಿ ಉಳಿದಿವೆ ಎಂದು ಲೋಕಸಭೆಗೆ ಶುಕ್ರವಾರ ಮಾಹಿತಿ ನೀಡಲಾಗಿದೆ.

ಈ ವರ್ಷದ ಮಾರ್ಚ್ 21ರ ವೇಳೆಗೆ ದೇಶದ 25 ಹೈಕೋರ್ಟ್‌ಗಳಲ್ಲಿ ಒಟ್ಟು 58,94,060 ಪ್ರಕರಣಗಳು ಬಾಕಿ ಉಳಿದಿವೆ.

ವಿವಿಧ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4,10,47,976 ಪ್ರಕರಣಗಳು ಬಾಕಿ ಉಳಿದಿವೆ ಎಂದು ಕಾನೂನು ಸಚಿವ ಕಿರಣ್‌ ರಿಜುಜು ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ADVERTISEMENT

ಅರುಣಾಚಲ ಪ್ರದೇಶ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಂಕಿಅಂಶಗಳು ರಾಷ್ಟ್ರೀಯ ನ್ಯಾಯಾಂಗದ ಡೇಟಾ ಗ್ರಿಡ್‌ನಲ್ಲಿ ಲಭ್ಯವಿಲ್ಲ ಎಂದು ಉತ್ತರದಲ್ಲಿ ಉಲ್ಲೇಖಿಸಲಾಗಿದೆ.

ಬಾಕಿ ಉಳಿದಿರುವ ಒಟ್ಟು ಪ್ರಕರಣಗಳ ಸಂಖ್ಯೆ 4,70,12,190 ಆಗಿದೆ ಎಂದು ರಿಜಿಜು ಇದೇ ವೇಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.