ADVERTISEMENT

ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಲ್ಲಿ 41.99 ಕೋಟಿ ಡೋಸ್‌ಗಳು ಲಭ್ಯ

ಪಿಟಿಐ
Published 18 ಜುಲೈ 2021, 8:13 IST
Last Updated 18 ಜುಲೈ 2021, 8:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 41.99 ಕೋಟಿಗೂ ಹೆಚ್ಚು (41,99,68,590) ಕೋವಿಡ್‌ ಲಸಿಕೆಯ ಡೋಸ್‌ಗಳನ್ನು ವಿತರಿಸಿದೆ. ಈ ಪೈಕಿ 2.56 ಕೋಟಿಗೂ ಹೆಚ್ಚು ಡೋಸ್‌ಗಳು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

‘ಮುಂಬರುವ ದಿನಗಳಲ್ಲಿ ಇನ್ನೂ 15,75,140 ಡೋಸ್‌ಗಳನ್ನು ಅವುಗಳಿಗೆ ನೀಡಲಾಗುವುದು’ ಎಂದು ಸಚಿವಾಲಯ ಹೇಳಿಕೆ ತಿಳಿಸಿದೆ

‘ಪೋಲಾಗಿರುವ ಲಸಿಕೆ ಸೇರಿ ಒಟ್ಟು 39,42,97,344 ಡೋಸ್‌ಗಳನ್ನು ಉಪಯೋಗಿಸಲಾಗಿದೆ. ಇನ್ನೂ 2,56,71,246 ಕೋಟಿಗೂ ಹೆಚ್ಚು ಡೋಸ್‌ಗಳು ಬಾಕಿ ಉಳಿದಿವೆ’ ಎಂದು ಸಚಿವಾಲಯ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.