ADVERTISEMENT

ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳಿಗೆ 66.07 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಣೆ

ಪಿಟಿಐ
Published 4 ಸೆಪ್ಟೆಂಬರ್ 2021, 11:30 IST
Last Updated 4 ಸೆಪ್ಟೆಂಬರ್ 2021, 11:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದಿಂದ ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ಅಡಿಯಲ್ಲಿ 66.07 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಅಲ್ಲದೆ, 4.49 ಕೋಟಿಗಿಂತ (4,49,68,620) ಹೆಚ್ಚು ಉಳಿಕೆ ಮತ್ತು ಬಳಕೆಯಾಗದ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರವು ಲಸಿಕೆ ನೀಡುವಿಕೆಯ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
'66.07 ಕೋಟಿಗಿಂತಲೂ (66,07,19,455) ಹೆಚ್ಚು ಲಸಿಕೆ ಡೋಸ್‌ಗಳನ್ನು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಮತ್ತು ನೇರ ರಾಜ್ಯ ಖರೀದಿ ವಿಧಾನದ ಮೂಲಕ ಒದಗಿಸಲಾಗಿದೆ. ಸದ್ಯ 85 ಲಕ್ಷಕ್ಕಿಂತ ಹೆಚ್ಚು ಡೋಸ್‌ಗಳು (85,63,780) ಪೂರೈಕೆಯ ಹಂತದಲ್ಲಿವೆ ಎಂದು ಅದು ಹೇಳಿದೆ.

ADVERTISEMENT

ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯಿರುವಂತೆ ಮಾಡುವ ಮೂಲಕ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯ ನೆರವು ನೀಡಲು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರವ್ಯಾಪಿ ಲಸಿಕೆ ಹಾಕುವಿಕೆಯ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.