ರಾಜಸ್ಥಾನ: ಕೊಳವೆ ಬಾವಿಗೆ ಬಿದ್ದ ಬಾಲಕಿ
(ಪಿಟಿಐ ಚಿತ್ರ)
ಜೈಪುರ: ಮೂರು ವರ್ಷದ ಬಾಲಕಿ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದ ಕೋಟಪುತಲಿ-ಬಹರೋಡ್ ಜಿಲ್ಲೆಯಿಂದ ವರದಿಯಾಗಿದೆ.
ಬಾಲಕಿ ಚೇತನ ಸುಮಾರು 150 ಆಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, 70 ತಾಸು ದಾಟಿದರೂ ಬಾಲಕಿಯನ್ನು ರಕ್ಷಿಸಲು ಸಾಧ್ಯವಾಗದಿರುವುದು ಆತಂಕಕ್ಕೆ ಕಾರಣವಾಗಿದೆ.
ಕೋಟಪುತಲಿ-ಬಹರೋಡ್ ಜಿಲ್ಲೆಯ ಸರುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಬಡಿಯಾಲಿ ಢಾಣಿಯ ಕೃಷಿ ಭೂಮಿಯಲ್ಲಿ ಆಟವಾಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಕೊಳವೆ ಬಾವಿಯೊಳಗೆ ಬಿದ್ದಿದ್ದಾಳೆ. ಈ ಆಘಾತಕಾರಿ ಸುದ್ದಿ ಅರಿತ ಬಳಿಕ ಬಾಲಕಿಯ ತಾಯಿ ಧೋಲಿದೇವಿ ಆಹಾರವನ್ನು ಸೇವಿಸುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್, ಆಡಳಿತದ ನೆರವಿನಿಂದ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಆದರೆ ಬಾಲಕಿಗೆ ಆಹಾರ ಅಥವಾ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ.
ಆರಂಭದಲ್ಲಿ ರಿಂಗ್ ಸಹಾಯದಿಂದ ಬಾಲಕಿಯನ್ನು ರಕ್ಷಿಸಲು ಯತ್ನಿಸಿದರೂ ವಿಫಲವಾಯಿತು. ಈಗ ಕೊಳವೆ ಬಾವಿಗೆ ಸಮಾನಾಂತರವಾಗಿ ಅಗೆಯುವ ಮೂಲಕ ರಕ್ಷಿಸಲು ಯತ್ನಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.