ADVERTISEMENT

ರಾಜ್ಯಗಳಲ್ಲಿ 79 ಲಕ್ಷ ಡೋಸ್‌ ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಸಚಿವಾಲಯ

ಪಿಟಿಐ
Published 1 ಮೇ 2021, 14:13 IST
Last Updated 1 ಮೇ 2021, 14:13 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 79 ಲಕ್ಷಕ್ಕೂ ಹೆಚ್ಚು ಕೋವಿಡ್‌–19 ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 17 ಲಕ್ಷಗಳಷ್ಟು ಡೋಸ್‌ಗಳನ್ನು ಸರಬರಾಜು ಮಾಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಕೇಂದ್ರ ಸರ್ಕಾರವು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯ 16.37 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಿದೆ ಎಂದು ತಿಳಿಸಿದೆ.

‘ಸದ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ ಲಸಿಕೆಯ 79,13,518 ಡೋಸ್‌ಗಳು ಲಭ್ಯವಿದೆ.ವ್ಯರ್ಥದ ಪ್ರಮಾಣವೂ ಸೇರಿದಂತೆ ಈವರೆಗೆ ಒಟ್ಟು 15 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಬಳಸಲಾಗಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.