ನವದೆಹಲಿ: 79.58 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್‌ಗಳನ್ನು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಇದಲ್ಲದೆ, 15 ಲಕ್ಷಕ್ಕೂ ಅಧಿಕ ಡೋಸ್‌ಗಳು ಪೂರೈಕೆ ಹಂತದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
5.43 ಕೋಟಿಗೂ ಹೆಚ್ಚು ಉಳಿಕೆ ಮತ್ತು ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಡೋಸ್‌ಗಳು ಲಭ್ಯತೆಯಿರುವಂತೆ ಮಾಡುವ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಅಭಿಯಾನಕ್ಕೆ ವೇಗ ಸಿಕ್ಕಿದೆ ಎಂದೂ ಹೇಳಿದೆ.
ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.