ADVERTISEMENT

82.57 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ ಪೂರೈಕೆ– ಆರೋಗ್ಯ ಸಚಿವಾಲಯ

ಪಿಟಿಐ
Published 25 ಸೆಪ್ಟೆಂಬರ್ 2021, 8:27 IST
Last Updated 25 ಸೆಪ್ಟೆಂಬರ್ 2021, 8:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ82.57 ಕೋಟಿ ಡೋಸ್‌ ಲಸಿಕೆ ಪೂರೈಸಲಾಗಿದೆ. 94 ಲಕ್ಷ ಡೋಸ್‌ಗಳನ್ನು ಪೂರೈಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಪ್ರಸ್ತುತ, ಲಸಿಕೆಯ 4.15 ಕೋಟಿ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿವೆ. ಲಸಿಕೆ ನೀಡಿಕೆಯ ವೇಗ ಹೆಚ್ಚಿಸಲುಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಲಭ್ಯವಿರುವಂತೆ ನೋಡಿಕೊಳ್ಳಲು‌ಮುಂಗಡವಾಗಿ ಲಸಿಕೆಗಳನ್ನು ಪೂರೈಸಲಾಗುತ್ತಿದೆ ಎಂದೂ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.