ADVERTISEMENT

ರಾಜ್ಯಗಳ ಬಳಿ 94 ಲಕ್ಷ ಡೋಸ್‌ ಲಸಿಕೆ ಲಭ್ಯ: ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 5 ಮೇ 2021, 8:45 IST
Last Updated 5 ಮೇ 2021, 8:45 IST
.
.   

ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 94.47 ಲಕ್ಷ ಡೋಸ್‌ ಲಸಿಕೆಗಳು ಲಭ್ಯವಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮುಂದಿನ ಮೂರು ದಿನಗಳಲ್ಲಿ 36 ಲಕ್ಷ ಡೋಸ್‌ಗಳನ್ನು ಮತ್ತೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೇಂದ್ರ ಸರ್ಕಾರ ಇದುವರೆಗೆ 17.02 ಕೋಟಿ ಲಸಿಕೆಗಳನ್ನು ಉಚಿತವಾಗಿ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಿದೆ. ಇದರಲ್ಲಿ ವ್ಯರ್ಥವಾಗಿರುವುದು ಸೇರಿದಂತೆ 16.07 ಕೋಟಿಯಷ್ಟು ಬಳಕೆಯಾಗಿದೆ ಎಂದು ತಿಳಿಸಿದೆ.

ADVERTISEMENT

ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಆರಂಭಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.