ADVERTISEMENT

ಕೇಂದ್ರದಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ: ಸಚಿವ ಜಿತೇಂದ್ರ ಸಿಂಗ್‌

ಪಿಟಿಐ
Published 3 ಆಗಸ್ಟ್ 2022, 12:35 IST
Last Updated 3 ಆಗಸ್ಟ್ 2022, 12:35 IST
ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್‌
ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್‌   

ನವದೆಹಲಿ: ‘ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2021 ಮಾರ್ಚ್‌ 1ರ ಅನ್ವಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ’ ಎಂದು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್‌ ಬುಧವಾರ ಮಾಹಿತಿ ನೀಡಿದರು.

‘23,584ಗ್ರೂಪ್‌ ‘ಎ’ ಹುದ್ದೆಗಳು,1,18,801 ಗ್ರೂಪ್‌ ‘ಬಿ’ ಹಾಗೂ8,36,936 ಗ್ರೂಪ್‌ ‘ಸಿ’ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಭರ್ತಿ ಮತ್ತು ಸೃಷ್ಟಿಯು ಆಯಾ ಇಲಾಖೆಗಳ ಜವಾಬ್ದಾರಿಯಾಗಿದೆ. ಇದೊಂದು ನಿರಂತರ ಪ್ರಕ್ರಿಯೆ’ ಎಂದು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT