ADVERTISEMENT

ಐದು ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದ 6 ಲಕ್ಷ ಜನ: ಕೇಂದ್ರ

ಪಿಟಿಐ
Published 30 ನವೆಂಬರ್ 2021, 12:51 IST
Last Updated 30 ನವೆಂಬರ್ 2021, 12:51 IST
   

ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಲಿಖಿತ ಉತ್ತರ ನೀಡಿದ್ದಾರೆ.

2017ನೇ ಸಾಲಿನಲ್ಲಿ 1,33,049 ಜನರು ಭಾರತೀಯ ಪೌರತ್ವ ತ್ಯಜಿಸಿದ್ದಾರೆ. ಹಾಗೆಯೇ 2018ರಲ್ಲಿ 1,34,561 ಜನರು, 2019ರಲ್ಲಿ 1,44,017 ಜನರು, 2020ರಲ್ಲಿ 85,248 ಮಂದಿ ಹಾಗೂ 2021ರ ಸೆಪ್ಟೆಂಬರ್‌ 30ರವರೆಗೆ 1,11,287 ಜನರು ಭಾರತೀಯ ಪೌರತ್ವ ತ್ಯಜಿಸಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.