ADVERTISEMENT

ಎಸ್‌ಟಿ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ

ಪಿಟಿಐ
Published 18 ಡಿಸೆಂಬರ್ 2025, 15:17 IST
Last Updated 18 ಡಿಸೆಂಬರ್ 2025, 15:17 IST
<div class="paragraphs"><p>ವಿದ್ಯಾರ್ಥಿ ವೇತನ</p></div>

ವಿದ್ಯಾರ್ಥಿ ವೇತನ

   

– ಗೆಟ್ಟಿ ಚಿತ್ರ

ನವದೆಹಲಿ: ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವ ಪರಿಶಿಷ್ಟ ಪಂಗಡದ(ಎಸ್‌ಟಿ) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಗಳ ಸಂಖ್ಯೆಯನ್ನು ಪ್ರಸ್ತುತ 20ರಿಂದ 50ಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರ ಸಚಿವ ಜುವಾಲ್‌ ಓರಾಂ ಅವರು ಲೋಕಸಭೆಗೆ ಗುರುವಾರ ತಿಳಿಸಿದರು.

ADVERTISEMENT

ವಿದೇಶ ವ್ಯಾಸಂಗಕ್ಕೆ ವಿದ್ಯಾರ್ಥಿವೇತನಗಳ ಸಂಖ್ಯೆ ಏಕೆ ಕಡಿಮೆಯಿದೆ ಎಂಬ ವಿರೋಧ ಪಕ್ಷದ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಜುವಾಲ್‌ ಓರಾಂ ಅವರು, ‘ದೀರ್ಘ ಕಾಲದವರೆಗೆ ಅಧಿಕಾರದಲ್ಲಿದ್ದಾಗ ಬುಡಕಟ್ಟು ಜನರ ಕಲ್ಯಾಣಕ್ಕೆ ವಿರೋಧ ಪಕ್ಷವು ಏನನ್ನೂ ಮಾಡಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.