ADVERTISEMENT

ಅಸಾದುದ್ದೀನ್ ಓವೈಸಿ 85 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ

​ಪ್ರಜಾವಾಣಿ ವಾರ್ತೆ
Published 23 ಮೇ 2019, 8:44 IST
Last Updated 23 ಮೇ 2019, 8:44 IST
   

ಹೈದರಾಬಾದ್ : ಹಿರಿಯ ಮುಖಂಡ ಅಸಾದುದ್ದೀನ್ ಓವೈಸಿ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಿಂತ 85 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.ಆಲ್ ಇಂಡಿಯಾ ಮಜಿಲಿಸ್ -ಇ-ಇತ್ತೆಹುದುಲ್ ಮುಸ್ಲೀಮೀನ್ (ಎಐಎಂಇಐಎಂ) ವತಿಯಿಂದ ಸ್ಪರ್ಧಿಸಿರುವ ಓವೈಸಿ ಗೆಲುವು ಸಾಧಿಸುವತ್ತ ಹೆಜ್ಜೆ ಹಾಕಿದ್ದಾರೆ.

ಬಿಜೆಪಿ ಭಗವಂತರಾವ್, ಕಾಂಗ್ರೆಸ್ ನ ಫಿರೋಜ್ ಖಾನ್, ಟಿಆರ್ ಎಸ್ ನ ಪಿ.ಶ್ರೀಕಾಂತ್ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳು. ಇವರಲ್ಲಿ ಕಾಂಗ್ರೆಸ್ ಹಾಗೂ ಟಿಆರ್ ಎಸ್ ಅಭ್ಯರ್ಥಿಗಳಿಂತ ಬಿಜೆಪಿ ಅಭ್ಯರ್ಥಿ ಆರಂಭದಲ್ಲಿ ಪೈಪೋಟಿ ನೀಡಿದರೂ ಮಧ್ಯಾಹ್ನದ ವೇಳೆಗೆ ಓವೈಸಿಯನ್ನು ಹಿಮ್ಮೆಟ್ಟಲು ಸಾಧ್ಯವಾಗಲಿಲ್ಲ.
ಕೇಂದ್ರದಲ್ಲಿ ಬಿಜೆಪಿ ಪಕ್ಷ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವಲ್ಲಿ ದಾಪುಗಾಲು ಇಡುತ್ತಿರುವ ಹೊತ್ತಿಗೆ ಹೈದರಾಬಾದ್ ನಲ್ಲಿ ಓವೈಸಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳನ್ನು ಹಿಮ್ಮೆಟ್ಟಿಸಿ ಮುಂದೆ ಸಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT