
ಹೈದರಾಬಾದ್: ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ಧೀನ್ ಓವೈಸಿ ಹೇಳಿದ್ದಾರೆ
ತೆಲಂಗಾಣದ ನಗರಸಭೆ ಚುನಾವಣೆಯ ಹಿನ್ನಲೆಯಲ್ಲಿ ಶುಕ್ರವಾರ ರಾತ್ರಿ ನಿಜಾಮಾಬಾದ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಓವೈಸಿ ಮಾತನಾಡಿದ್ದಾರೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಮುಪ್ಪಿನಂಚಿನಲ್ಲಿದ್ದಾರೆ. ಆದರೆ, ಭಾರತದಲ್ಲಿ ಶೇ 60ರಷ್ಟು ಜನರು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇದ್ದಾರೆ ಎಂದು ಹೇಳಿದ್ದರು. ಆದರೆ, ಅವರ ಉದ್ಯೋಗಕ್ಕಾಗಿ ಪ್ರಧಾನಿ ಮೋದಿ ಅವರು ಯಾವ ಕ್ರಮ ಕೈಗೊಂಡಿದ್ದಾರೆ, ಅವರ ಕೌಶಲ್ಯ ವೃದ್ಧಿಗೆ ಏನು ಮಾಡಿದ್ದಾರೆ ? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಅವರು ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಚಿಂತಿಸುತ್ತಿಲ್ಲ. ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿದೆ ಎಂದು ಭಾಷಣ ಮಾಡುತ್ತಿದ್ದಾರೆ. ಆದರೆ, ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಸ್ಥಿರವಾಗಿರಲಿದೆ ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಮುಖ್ಯಸ್ಥರು ಮುಸ್ಲಿಂರನ್ನು ವಿರೋಧಿಸಿ, ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಮಾಡಲು ಒತ್ತಾಯಿಸಿದ್ದರು. ನಂತರ, ಮೂರು ಮಕ್ಕಳಿಗೆ ಜನ್ಮನೀಡಿ ಎಂದು ಅವರು ಕರೆ ಕೊಟ್ಟಿದ್ದರು. ಆದರೆ, ಅದನ್ನು ಅವರೇ ಪಾಲಿಸಿಲ್ಲ ಎಂದು ಕಿಡಿಕಾರಿದ್ದಾರೆ.
ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಭಾರತದ ವಿರುದ್ಧ ಆಡಲು ನಿರಾಕರಿಸಿದರೆ, ಅವರನ್ನು ಇಲ್ಲಿಗೇಕೆ ಬಂದಿದ್ದೀರಾ, ಮರಳಿ ನಿಮ್ಮ ದೇಶಕ್ಕೆ ಹೋಗಿ ಎನ್ನಬೇಕು. ಆದರೆ, ಸರ್ಕಾರವು ಏನೂ ಮಾತನಾಡದೇ, ಸುಮ್ಮನೆ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.