ಅಸಾದುದ್ದೀನ್ ಓವೈಸಿ
ಹೈದರಾಬಾದ್: ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ವಿರುದ್ಧ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದು ಆರೋಪಿಸಿರುವ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಭಾರತವು ಆ ಅಪರಾಧಗಳಲ್ಲಿ ಭಾಗಿಯಾಗಿರುವ ದೇಶಗಳೊಂದಿಗೆ ಸೇರದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತವು ಸದಾ ಪ್ಯಾಲೆಸ್ಟೀನಿಯನ್ನರನ್ನು ಬೆಂಬಲಿಸಿದ್ದು, ಇಸ್ರೇಲ್ ನರಮೇಧವನ್ನು ವಿರೋಧಿಸಿದೆ ಎಂದು ಹೇಳಿದ್ದಾರೆ.
ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ವಿರುದ್ಧ ಇಸ್ರೇಲ್ ನರಮೇಧವನ್ನು ನಡೆಸುತ್ತಿದೆ. ಇಸ್ರೇಲ್‌ನ ಅಪರಾಧಗಳಲ್ಲಿ ಭಾಗಿಯಾಗಿರುವ ದೇಶಗಳೊಂದಿಗೆ ಭಾರತ ಸೇರದಂತೆ ಪ್ರಧಾನಿ ನರೇಂದ್ರ ಮೋದಿ ಖಚಿತಪಡಿಸಬೇಕು. ಭಾರತ ಯಾವಾಗಲೂ ಪ್ಯಾಲೆಸ್ಟೀನಿಯರನ್ನು ಬೆಂಬಲಿಸಿದೆ. ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸಿದೆ’ಎಂದು ಓವೈಸಿ ಹೇಳಿದ್ದಾರೆ.
ಇದೇವೇಳೆ, ಇಸ್ರೇಲ್ ನರಮೇಧದ ವಿರುದ್ಧ ನಿರ್ಣಾಯಕ ಕ್ರಮ ಅಗತ್ಯ ಎಂದು ತಿಳಿಸಿದ್ದಾರೆ.
ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿ ಓವೈಸಿ ಈ ಹಿಂದೆ ಹಲವು ಬಾರಿ ಹೇಳಿಕೆಗಳನ್ನು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.