ADVERTISEMENT

ಗೋವಾದಲ್ಲಿ ಸುಧಾರಿಸಿದ ಆಕ್ಸಿಜನ್‌ ಕೊರತೆ ಸಮಸ್ಯೆ

ಪಿಟಿಐ
Published 16 ಮೇ 2021, 5:53 IST
Last Updated 16 ಮೇ 2021, 5:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಣಜಿ: ‘ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಮ್ಲಜನಕದ ಹೊಸ ಟ್ಯಾಂಕ್‌ ನಿಯೋಜಿಸಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಸುಧಾರಣೆ ಕಂಡುಬಂದಿದೆ’ ಎಂದು ಗೋವಾದ ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ಅವರು ಭಾನುವಾರ ತಿಳಿಸಿದರು.

‘ಕಳೆದ ಐದು ದಿನಗಳಲ್ಲಿ (ಶನಿವಾರ ಬೆಳಿಗ್ಗೆ ತನಕ) ಬೆಳಿಗ್ಗೆ 2 ರಿಂದ ಬೆಳಿಗ್ಗೆ 6 ರ ನಡುವಿನ ಅವಧಿಯಲ್ಲಿ ಆಮ್ಲಜನಕ ಕೊರತೆಯಿಂದ 83 ರೋಗಿಗಳು ಈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.

‘20,000 ಕಿ.ಲೀ ಸಾಮರ್ಥ್ಯದ ಆಮ್ಲಜನಕ ಟ್ಯಾಂಕನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ(ಜಿಎಂಸಿಎಚ್‌) ಶನಿವಾರ ನಿಯೋಜಿಸಲಾಗಿದೆ. ಈ ಬಳಿಕ ಆಸ್ಪತ್ರೆಯಲ್ಲಿ ಪರಿಸ್ಥಿತಿ ಸುಧಾರಿಸಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಭಾವಿಸುತ್ತೇನೆ ’ ಎಂದು ಅವರು ಹೇಳಿದರು.

ADVERTISEMENT

‘ಬಿಚೋಲಿಮ್ ಕೈಗಾರಿಕಾ ಎಸ್ಟೇಟ್‌ನಿಂದ ಆಮ್ಲಜನಕ ಟ್ಯಾಂಕ್‌ ಅನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದರಿಂದಾಗಿ ಆಮ್ಲಜನಕ ಸಿಲಿಂಡರ್‌ಗಳ ಮೇಲೆ ಅವಲಂಬನೆಯು ಕಡಿಮೆಯಾಗಲಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಶನಿವಾರ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.