
ಪ್ರಜಾವಾಣಿ ವಾರ್ತೆ
ನವದೆಹಲಿ: ಏರ್‌ಸೆಲ್–ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹಾಗೂ ಇತರ ಎಂಟು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಜುಲೈ 19ರಂದು ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಈಗ ಇ.ಡಿ ಸಹ ಆರೋಪಪಟ್ಟಿ ಸಲ್ಲಿಸಿರುವುದರಿಂದ ಚಿದಂಬರಂ ಮತ್ತಷ್ಟೂ ಸಂಕಷ್ಟದ ಸುಳಿಗೆ ಸಿಲುಕಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.