ಅಮಿತ್ ಶಾ
ಜೈಪುರ: ಭಾರತದ ನಾಗರಿಕರು, ಅದರ ಗಡಿ ಮತ್ತು ರಕ್ಷಣಾ ಪಡೆಗಳಿಗೆ ದ್ರೋಹ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಬಲವಾದ ಸಂದೇಶವನ್ನು ಜಗತ್ತಿಗೆ ರವಾನಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
2025ರ ಅಂತರರಾಷ್ಟ್ರೀಯ ಸಹಕಾರಿ ವರ್ಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಹಾಗೆ ಮಾಡಲು ಯತ್ನಿಸಿದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದಲ್ಲಿರುವ ಉಗ್ರರ ಶಿಬಿರಗಳನ್ನು ನಾಶಪಡಿಸಲು ಕೈಗೊಂಡ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ದೇಶದ ಭದ್ರತೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ನಿರ್ಧಾರ ಕೈಗೊಂಡಿದ್ದರು ಎಂದಿದ್ದಾರೆ.
‘ಕಾಂಗ್ರೆಸ್ ಆಳ್ವಿಕೆಯಲ್ಲಿ ದೇಶವು ಭಯೋತ್ಪಾದಕ ದಾಳಿಗಳಿಂದ ತತ್ತರಿಸಿ ಹೋಗಿತ್ತು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.