ಆಪರೇಷನ್ ಸಿಂಧೂರ
ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಕ್ಷಿಪಣಿ ದಾಳಿ ಕುರಿತಾಗಿ ಪಹಲ್ಗಾಮ್‌ನಲ್ಲಿ ಹತ್ಯೆಯಾದ ಸಂತೋಷ್ ಜಗದಾಳೆ ಅವರ ಪುತ್ರಿ ಅಸವರಿ ಜಗದಾಳೆ ಪ್ರತಿಕ್ರಿಯೆ ನೀಡಿದ್ದಾರೆ.
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಹೆಸರು ಕೇಳಿದಾಗ ನಾನು ಭಾವುಕಳಾದೇ, ಇದು, ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಹತ್ಯೆಗೀಡಾದವರಿಗೆ ಸಿಕ್ಕ ನಾಯ್ಯಯುತ ಗೌರವ ಎಂದು ಅಸವರಿ ಜಗದಾಳೆ ಹೇಳಿದ್ದಾರೆ. ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಅಸವರಿ ಜಗದಾಳೆ ಅವರ ತಂದೆ ಸಂತೋಷ್ ಜಗದಾಳೆ ಪಹಲ್ಗಾಮ್ ದಾಳಿಯಲ್ಲಿ ಹತ್ಯೆಯಾಗಿದ್ದರು.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಲಷ್ಕರ್-ಎ-ತಯಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗಳಿಗೆ ಸೇರಿದ 9 ನೆಲೆಗಳ ಮೇಲೆ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆ ನಡೆಸಿದ್ದು ಸುಮಾರು 90ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.