ADVERTISEMENT

ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಉಗ್ರರು–ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ

ಪಿಟಿಐ
Published 25 ಏಪ್ರಿಲ್ 2025, 2:19 IST
Last Updated 25 ಏಪ್ರಿಲ್ 2025, 2:19 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಡಗಿರುವ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಬದಲಾಯಿತು ಎಂದು ಅವರು ಹೇಳಿದ್ದಾರೆ.

ADVERTISEMENT

ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವಿನ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.