ADVERTISEMENT

Bandipora Encounter: ಉಗ್ರರ ಸಹಚರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಪಿಟಿಐ
Published 25 ಏಪ್ರಿಲ್ 2025, 9:10 IST
Last Updated 25 ಏಪ್ರಿಲ್ 2025, 9:10 IST
<div class="paragraphs"><p>ಭದ್ರತಾ ಪಡೆ</p></div>

ಭದ್ರತಾ ಪಡೆ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರ ಸಹಚರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ADVERTISEMENT

ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪೋರಾದ ಪ್ರದೇಶವನ್ನು ಸುತ್ತುವರಿದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಅವಿತಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ತಕ್ಷಣವೇ ಭದ್ರತಾ ಪಡೆಗಳು ತಕ್ಕ ಪ್ರತ್ಯುತ್ತರವನ್ನು ನೀಡಿವೆ. ಈ ನಡುವೆ ಉಗ್ರರಿಗೆ ನೆರವಾಗುವ ಸಹಚರನನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.