ADVERTISEMENT

Pahalgam Attack ಪಕ್ಷದ ನಿಲುವಿಗೆ ಬದ್ಧವಾಗಿರಿ; ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ

ಪಿಟಿಐ
Published 30 ಏಪ್ರಿಲ್ 2025, 4:48 IST
Last Updated 30 ಏಪ್ರಿಲ್ 2025, 4:48 IST
ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್   

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಸಂಬಂಧಪಟ್ಟಂತೆ ಪಕ್ಷದ ನಿಲುವಿಗೆ ಬದ್ಧವಾಗಿರಬೇಕು, ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್ ತನ್ನ ನಾಯಕರನ್ನು ಎಚ್ಚರಿಸಿದೆ.

ಕಾಂಗ್ರೆಸ್‌ನ ಕೆಲವು ನಾಯಕರು ನೀಡಿದ ಹೇಳಿಕೆಗಳು ವಿವಾದವನ್ನು ಹುಟ್ಟು ಹಾಕಿತ್ತು. ಕಾಂಗ್ರೆಸ್ ಭಯೋತ್ಪಾದಕರ ಹಾಗೂ ಪಾಕಿಸ್ತಾನದ ಪರವಾಗಿ ಮಾತನಾಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಈ ಹಿನ್ನೆಲೆಯಲ್ಲಿ ಪಿಸಿಸಿ ಅಧ್ಯಕ್ಷರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು, ಸಂಸದರು, ಶಾಸಕರು ಹಾಗೂ ವಿವಿಧ ಇಲಾಖೆಯ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ನಾಯಕರು ಬಹಿರಂಗ ಭಾಷಣದಲ್ಲಿ ಪಕ್ಷದ ಶಿಸ್ತು ಹಾಗೂ ಸ್ಥಿರತೆಯನ್ನು ಕಾಪಾಡಿಕೊಳ್ಳುವಂತೆಯೂ ಪಹಲ್ಗಾಮ್ ವಿಷಯದಲ್ಲಿ ಅನಗತ್ಯ ಹೇಳಿಕೆ ನೀಡದಂತೆಯೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೂಚನೆ ನೀಡಿದ್ದಾರೆ.

ADVERTISEMENT

ಈ ಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಹೊಣೆಗಾರಿಕೆ ಸಮಯದಲ್ಲಿ ಮಾಯವಾಗುತ್ತಾರೆ ಎಂದು ವ್ಯಂಗ್ಯವಾಗಿ ಬಿಂಬಿಸುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಅದನ್ನು ಅಳಿಸಿ ಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.