ರಾಹುಲ್ ಗಾಂಧಿ
ಪಿಟಿಐ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪ ನಡೆದ ಉಗ್ರರ ದಾಳಿ ಕುರಿತು ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ (ಸಿಡಬ್ಲ್ಯುಸಿ) ಇಂದು ನಡೆಯಲಿದೆ.
ಈ ಸಭೆಯಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ಅವರು ಅಮೆರಿಕ ಪ್ರವಾರ ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದರು. 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.
'ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಗುರುವಾರ ಬೆಳಿಗ್ಗೆ 10.30ಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲಿದ್ದಾರೆ' ಎಂದು ಜೈರಾಮ್ ರಮೇಶ್ ಬುಧವಾರ ರಾತ್ರಿ ಎಕ್ಸ್/ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ರಾಹುಲ್, ಅಮೆರಿಕದ ಬೋಸ್ಟನ್‌ಗೆ ಶನಿವಾರ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.