ಪಿಟಿಐ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಭಾಗಿಯಾದ ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಉಗ್ರರ ಮನೆಗಳು ಸ್ಫೋಟದಲ್ಲಿ ಧ್ವಂಸಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿ ನಡೆದ ಸ್ಫೋಟದಲ್ಲಿ ಮನೆಗಳು ಧ್ವಂಸಗೊಂಡಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಬಿಜ್‌ಬೆಹೆರಾ ಮತ್ತು ತ್ರಾಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳಲ್ಲಿ ಶೋಧ ಕಾರ್ಯ ನಡೆಸಿವೆ. ಈ ವೇಳೆ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿನ ಹಾಗೂ ನೆರೆಹೊರೆಯ ನಿವಾಸಿಗಳನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ನಿವಾಸಿ ಥೋಕರ್, ಪಹಲ್ಗಾಮ್ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ. ಪುಲ್ವಾಮಾ ಜಿಲ್ಲೆಯ ತ್ರಾಲ್‌ನ ನಿವಾಸಿ ಆಸಿಫ್ ಎಂಬಾತ ದಾಳಿಯ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.