ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವಂತೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಮನವಿ ಮಾಡಿದ್ದಾರೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾಧನಾ ದಾಳಿಯಾದ ನಂತರ ಭಾರತ ಮತ್ತು ಪಾಕ್ ನಡುವಿನ ದ್ವಿಪಕ್ಷೀಯ ಸಂಬಂಧವು ಹದಗೆಟ್ಟಿದೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಭಯ ದೇಶಗಳ ನಡುವಿನ ಸಂಘರ್ಷದಿಂದ ಎರಡೂ ದೇಶಗಳಲ್ಲಿ ಮಹಿಳೆ ಹಾಗೂ ಮಕ್ಕಳು ಸೇರಿದಂತೆ ಅಮಾಯಕರ ಸಾವಾಗುತ್ತಿದ್ದು, ಮನುಷ್ಯನ ಜೀವಕ್ಕೆ ಬೆಲೆಯಿಲ್ಲವಾಗಿದೆ. ಸಂಘರ್ಷ ಮುಂದುವರಿದರೆ ಎರಡೂ ಕಡೆಗಳಲ್ಲಿ ಮತ್ತಷ್ಟು ಸಾವುಗಳಾಗಲಿವೆ ಎಂದಿದ್ದಾರೆ.
ನೋವಿನ ಸಂಗತಿಯೆಂದರೆ, ಸಂಘರ್ಷವನ್ನು ತಪ್ಪಿಸಲು ಸೈನ್ಯದ ತಂತ್ರಗಳ ಮೂಲಕ ಸಾಧ್ಯವಿಲ್ಲ. ಅದರಿಂದ ಕೇವಲ ನೋವಷ್ಟೇ ಆಗಲಿದೆ. ಉಭಯ ದೇಶದ ನಾಯಕರು ಶಾಂತಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಉಭಯ ದೇಶಗಳ ನಡುವಿನ ಸಂಘರ್ಷವನ್ನು ಶಾಂತಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ.
ಇದರಿಂದ ಕಣಿವೆ ರಾಜ್ಯದಲ್ಲಿ ಮತ್ತೆ ಶಾಂತಿ ನೆಲೆಯಾಗಲಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.