ADVERTISEMENT

ಪಾಕಿಸ್ತಾನ ಧ್ವಜವಿರುವ ಹಡಗುಗಳಿಗೆ ಭಾರತದ ಬಂದರುಗಳಲ್ಲಿ ಪ್ರವೇಶ ನಿಷಿದ್ಧ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 3 ಮೇ 2025, 10:03 IST
Last Updated 3 ಮೇ 2025, 10:03 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಪಾಕಿಸ್ತಾನದ ಧ್ವಜವುಳ್ಳ ಹಡಗುಗಳು ಭಾರತದ ಬಂದರುಗಳಿಗೆ ಪ್ರವೇಶಿಸಲು ಅವಕಾಶ ನೀಡಬಾರದು. ಹಾಗೆಯೇ, ಭಾರತದ ಹಡಗುಗಳು ಪಾಕಿಸ್ತಾನದ ಯಾವುದೇ ಬಂದರಿಗೆ ತಲುಪಬಾರದು ಎಂದು ಕೇಂದ್ರ ಬಂದರು ಮತ್ತು ಜಲಸಾರಿಗೆ ಸಚಿವಾಲಯ ಶನಿವಾರ ಆದೇಶ ಹೊರಡಿಸಿದೆ.

ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ ಸಮೀಪದಲ್ಲಿರುವ ಪ್ರವಾಸಿ ಸ್ಥಳದಲ್ಲಿ ಏಪ್ರಿಲ್‌ 22ರಂದು ಉಗ್ರರು ಗುಂಡಿನ ದಾಳಿ ನಡೆಸಿ, 26 ಜನರನ್ನು ಹತ್ಯೆ ಮಾಡಿದ್ದರು. ಅದಾದ ಬಳಿಕ ಉಭಯ ದೇಶಗಳ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಇದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ADVERTISEMENT

ಸಚಿವಾಲಯದ ಪ್ರಕಟಣೆ ಪ್ರಕಾರ, ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.