ಜೆ.ಪಿ.ನಡ್ಡಾ
–ಪಿಟಿಐ ಚಿತ್ರ
ಪುಣೆ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕಾರಣರಾದವರಿಗೆ ಭಾರತ ತಕ್ಕ ಉತ್ತರ ನೀಡಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹೇಡಿತನದ ದಾಳಿಯಿಂದ ಇಡೀ ದೇಶವೇ ಕೋಪಗೊಂಡಿದೆ. ಈ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಪ್ರತಿಕ್ರಿಯೆ ನೀಡುತ್ತಾರೆ ಎಂದು ಇಡೀ ದೇಶ ಆಶಿಸುತ್ತಿದೆ’ ಎಂದು ತಿಳಿಸಿದ್ದಾರೆ.
ದೇಶವು ಪರಿಸ್ಥಿತಿಯನ್ನು ಬಲವಾಗಿ ಎದುರಿಸಬೇಕು ಮತ್ತು ದಾಳಿಗೆ ಕಾರಣರಾದವರಿಗೆ ತಕ್ಕ ಉತ್ತರ ನೀಡಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಸೂಕ್ತ ಉತ್ತರ ನೀಡಲಾಗುವುದು ಎಂದು ನಡ್ಡಾ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.