ADVERTISEMENT

Pahalgam Terror Attack | ಪಾಕ್‌ ಪ್ರಜೆಗಳಿಗೆ ನೀಡಿದ್ದ ವೀಸಾ ಸೇವೆ ರದ್ದು: MEA

ಪಿಟಿಐ
Published 24 ಏಪ್ರಿಲ್ 2025, 11:35 IST
Last Updated 24 ಏಪ್ರಿಲ್ 2025, 11:35 IST
   

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಪ್ರಜೆಗಳಿಗೆ ನೀಡಿದ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸುವುದಾಗಿ ಗುರುವಾರ ಪ್ರಕಟಿಸಿದೆ.

ಏಪ್ರಿಲ್ 27 ರಿಂದ ಜಾರಿಗೆ ಬರುವಂತೆ ಭಾರತವು ಪಾಕಿಸ್ತಾನದ ಪ್ರಜೆಗಳಿಗೆ ನೀಡಿರುವ ಎಲ್ಲಾ ಮಾನ್ಯ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾಗಿರುವ ವೈದ್ಯಕೀಯ ವೀಸಾಗಳು ಏಪ್ರಿಲ್ 29 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದೂ ಅದು ಹೇಳಿದೆ.

ವೀಸಾ ಅವಧಿ ಮುಗಿಯುವ ಮೊದಲು ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನದ ಪ್ರಜೆಗಳು ದೇಶವನ್ನು ತೊರೆಯಬೇಕು ಎಂದು ಎಂಇಎ ತಿಳಿಸಿದೆ. ಅಲ್ಲದೇ ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಮತ್ತು ಪ್ರಸ್ತುತ ಆ ದೇಶದಲ್ಲಿ ನೆಲೆಸಿರುವವರು ಆದಷ್ಟು ಬೇಗ ಭಾರತಕ್ಕೆ ಮರಳುವಂತೆಯೂ ಸೂಚಿಸಿದೆ.

ADVERTISEMENT

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿಮೆ ಮಾಡಲು ತೀರ್ಮಾನಿಸಿದೆ. ಮುಖ್ಯವಾಗಿ ಸಿಂಧೂ ಜಲ ಒಪ್ಪಂದ ಅಮಾನತು, ವಾಘಾ–ಅಟ್ಟಾರಿ ಗಡಿ ಬಂದ್, ಪಾಕಿಸ್ತಾನದಲ್ಲಿನ ಭಾರತದ ದೂತಾವಾಸ ಕಚೇರಿಗಳಲ್ಲಿನ ಸಿಬ್ಬಂದಿ ಸಂಖ್ಯೆ ಕಡಿತ ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.