ಮೇಜರ್ ಜನರಲ್ ಧನಂಜಯ್ ಜೋಶಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ಉಗ್ರರ ದಾಳಿಯದ ನಂತರ ಭದ್ರತಾ ಪಡೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ ಪ್ರಮುಖ ಉಗ್ರರನ್ನು ಹೊಡೆದುರುಳಿಸಿದೆ ಎಂದು ಅಧಿಕಾರಿಳು ತಿಳಿಸಿದ್ದಾರೆ.
ಜಿಒಸಿ ವಿಕ್ಟರ್ ಫೋರ್ಸ್ ಮೇಜರ್ ಜನರಲ್ ಧನಂಜಯ್ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ದಕ್ಷಿಣ ಕಾಶ್ಮೀರದಲ್ಲಿ ಎರಡು ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಆಪರೇಷನ್ ಕೆಲ್ಲಾರ್ (ಶೋಪಿಯಾನ್) ಮತ್ತು ಆಪರೇಷನ್ ತ್ರಾಲ್ (ಪುಲ್ವಾಮಾ)ದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಆರು ಉಗ್ರರ ಹತ್ಯೆ ಮಾಡಲಾಗಿದೆ. ಇದು ಭದ್ರತಾ ಪಡೆಗಳ ನಡುವಿನ ನಿಕಟ ಸಮನ್ವಯದಿಂದ ಸಾಧ್ಯವಾಗಿದೆ ಎಂದು ಅವರು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.