ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಚರ್ಚಿಸಲು ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದ ಪ್ರತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾಜಿಕ ಮಾಧ್ಯಮ 'ಎಕ್ಸ್‌ನ'ಲ್ಲಿ ಪೋಸ್ಟ್ ಮಾಡಿದ್ದಾರೆ.
'ಏಕತೆ ಮತ್ತು ಒಗ್ಗಟ್ಟು ಅತ್ಯಗತ್ಯವಾಗಿರುವ ಈ ಸಮಯದಲ್ಲಿ, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯುವುದು ಮುಖ್ಯ ಎಂಬುವುದು ವಿರೋಧ ಪಕ್ಷಗಳ ಅಭಿಪ್ರಾಯ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಮುಗ್ಧ ನಾಗರಿಕರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪ ಮತ್ತು ಇಚ್ಛಾಶಕ್ತಿ ಮುಖ್ಯ. ಹಾಗಾಗಿ ಆದಷ್ಟು ಬೇಗ ವಿಶೇಷ ಅಧಿವೇಶ ಕರೆಯಬೇಕೆಂದು ನಾವು ಆಗ್ರಹಿಸುತ್ತೇವೆ' ಎಂದು ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.