ADVERTISEMENT

‘ಆಪರೇಷನ್ ಸಿಂಧೂರ’:ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಪೂರ್ಣಗೊಳಿಸಿದ್ದೇವೆ: IAF

ಪಿಟಿಐ
Published 11 ಮೇ 2025, 10:07 IST
Last Updated 11 ಮೇ 2025, 10:07 IST
   

ನವದೆಹಲಿ: ‘ಆಪರೇಷನ್ ಸಿಂಧೂರ’ಅಡಿ ತಮಗೆ ವಹಿಸಲಾಗಿದ್ದ ಕಾರ್ಯಾಚರಣೆಯನ್ನು ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ವಾಯುಪಡೆ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ಆದರೆ, ಇತರೆ ಕಾರ್ಯಾಚರಣೆಗಳು ಮಾತ್ರ ಇನ್ನೂ ನಡೆಯುತ್ತಿವೆ ಅದು ತಿಳಿಸಿದೆ. ಈ ಸಂಬಂಧ ಸೂಕ್ತ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಅದು ತಿಳಿಸಿದೆ.

ಅಲ್ಲದೆ, ಊಹಾಪೋಹಗಳಿಂದ ದೂರವಿರಲು ಮತ್ತು ಪರಿಶೀಲಿಸದ ಮಾಹಿತಿಯನ್ನು ಪ್ರಸಾರ ಮಾಡದಿರುವಂತೆಯೂ ವಾಯುಪಡೆ ಮನವಿ ಮಾಡಿದೆ.

ADVERTISEMENT

‘ಆಪರೇಷನ್ ಸಿಂಧೂರ’ ಅಡಿಯಲ್ಲಿ ನಿಯೋಜಿಸಲಾಗಿದ್ದ ಕಾರ್ಯಗಳನ್ನು ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ವಾಯುಪಡೆ ಯಶಸ್ವಿಯಾಗಿ ನಿರ್ವಹಿಸಿದೆ. ಕಾರ್ಯಾಚರಣೆಗಳನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಯಿತು. ಆದರೆ, ಆ ನಂತರದ ಇತರ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವುದರಿಂದ, ಸರಿಯಾದ ಸಮಯದಲ್ಲಿ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು. ಪರಿಶೀಲಿಸದ ಮಾಹಿತಿ, ಊಹಾಪೋಹಗಳ ಕುರಿತಾದ ಸುದ್ದಿಗಳನ್ನು ಪ್ರಸರಣಮಾಡದಂತೆ ಒತ್ತಾಯಿಸುತ್ತೇವೆ’ಎಂದು ಭಾರತೀಯ ವಾಯುಪಡೆಯು ತನ್ನ ಅಧಿಕೃತ 'ಎಕ್ಸ್' ಖಾತೆಯ ಪೋಸ್ಟ್‌ನಲ್ಲಿ ತಿಳಿಸಿದೆ.

ಮೇ 7ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ ಆರಂಭಿಸಿದ್ದವು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ(ಪಿಒಕೆ) ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದವು.

ಭಾರತದ ಪ್ರತಿ ದಾಳಿ ನಂತರ, ಸಂಘರ್ಷ ತೀವ್ರಗೊಂಡಿತ್ತು. ಇದರ ಪರಿಣಾಮವಾಗಿ ಪಾಕಿಸ್ತಾನದಿಂದ ಗಡಿಯಾಚೆಗಿನ ಶೆಲ್ ದಾಳಿ ಮತ್ತು ಭಾರತೀಯ ಸಶಸ್ತ್ರ ಪಡೆಗಳಿಂದ ಪ್ರತೀಕಾರದ ದಾಳಿಗಳು ಹೆಚ್ಚಾಗಿವೆ.

ಗಡಿಯುದ್ದಕ್ಕೂ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಮಾಡಲಾಗಿದೆ. ಪಾಕಿಸ್ತಾನದಿಂದ ದಾಳಿಗಳು ನಡೆದಾಗಲೆಲ್ಲಾ ಬ್ಲಾಕೌಟ್ ಮಾಡಲಾಗುತ್ತಿದೆ.

ಆದರೆ, ಶನಿವಾರ ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಯುದ್ಧ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದವು. ಸಂಜೆ 5 ಗಂಟೆಯಿಂದ ಈ ವಿರಾಮ ಜಾರಿಗೆ ಬಂದಿತ್ತು. ಅದರ ಬಳಿಕವೂ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಯುದ್ಧ ವಿರಾಮ ಉಲ್ಲಂಘಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.