ಜಮ್ಮುವಿನಲ್ಲಿ ಬ್ಲಾಕ್ ಔಟ್
ಜಮ್ಮು: ಜಮ್ಮು ಮತ್ತು ಕಾಶ್ಮೀರದ ವಿಮಾನ ನಿಲ್ದಾಣ ಗುರಿಯಾಗಿಸಿ ದಾಳಿ ನಡೆಸಲು ಪಾಕಿಸ್ತಾನ ಯತ್ನ ಮಾಡಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.
ಇದರಿಂದಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಜಮ್ಮು ನಗರ ಮತ್ತು ಸಮೀಪದ ಪ್ರದೇಶಗಳಲ್ಲಿ 'ಬ್ಲಾಕ್ ಔಟ್' ಕ್ರಮ ಅನುಸರಿಸಲಾಗಿದೆ.
ಈ ಸಂಬಂಧ ವಿಡಿಯೊ ಹಂಚಿಕೊಳ್ಳಲಾಗಿದೆ. ಪಾಕ್‌ಗೆ ತಕ್ಕ ಪ್ರತ್ಯುತ್ತರ ನೀಡುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದೆ.
ಬ್ಲಾಕ್ ಔಟ್ ಎಂದರೇನು?
ಯುದ್ಧದಂತಹ ಪರಿಸ್ಥಿತಿಯಲ್ಲಿ ನಾಗರಿಕರ ರಕ್ಷಣೆಗಾಗಿ 'ಬ್ಲಾಕ್ ಔಟ್' ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿದುಕೊಳ್ಳಲಾಗುತ್ತದೆ. ಬೀದಿ ದೀಪಗಳು ಉರಿಯುವುದಿಲ್ಲ.
ಈ ಸಂದರ್ಭದಲ್ಲಿ ಹಲವೆಡೆ ಸೈರನ್ ಮೊಳಗಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಪಾಕಿಸ್ತಾನ ವಿರುದ್ಧ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಬೆನ್ನಲ್ಲೇ ಜಮ್ಮು ಸೇರಿದಂತೆ ದೇಶದ ಹಲವು ನಗರಗಳಲ್ಲಿ ನಾಗರಿಕ ರಕ್ಷಣಾ ತಾಲೀಮಿನ ಭಾಗವಾಗಿ ಬ್ಲಾಕ್ ಔಟ್ ಕ್ರಮವನ್ನು ಪ್ರದರ್ಶಿಸಲಾಗಿತ್ತು.
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ದಾಳಿಯಲ್ಲಿ ಉಗ್ರರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು.
ರಾಜಸ್ಥಾನದಲ್ಲೂ ಸಂಪೂರ್ಣ ಬ್ಲಾಕ್ ಔಟ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.