ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸತತ 8ನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಶುಕ್ರವಾರ) ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ನೌಶೇರಾ ಮತ್ತು ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಏಪ್ರಿಲ್ 24ರ ರಾತ್ರಿಯಿಂದ, ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ವಿವಿಧ ಸ್ಥಳಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ವಿಚಾರವಾಗಿ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.