ADVERTISEMENT

Pahalgam Attack: ಸತತ 7ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

ಪಿಟಿಐ
Published 1 ಮೇ 2025, 4:29 IST
Last Updated 1 ಮೇ 2025, 4:29 IST
<div class="paragraphs"><p>ಭದ್ರತಾ ಪಡೆ</p></div>

ಭದ್ರತಾ ಪಡೆ

   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸತತ ಏಳನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸತತ ಏಳನೇ ದಿನದ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಭಾರತ ಮತ್ತು ಪಾಕಿಸ್ತಾನ ಸೇನೆಗಳ ಕಾರ್ಯಾಚರಣೆ ಮಹಾನಿರ್ದೇಶಕರ (ಡಿಜಿಎಂಒ) ಮಧ್ಯೆ ನಡೆದ ಮಾತುಕತೆ ಬಳಿಕವೂ ಗುಂಡಿನ ಚಕಮಕಿ ಮುಂದುವರಿದಿದೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕುಪ್ವಾರ, ಉರಿ ಹಾಗೂ ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ವಿಚಾರವಾಗಿ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.