ADVERTISEMENT

ಗಡಿಯಲ್ಲಿ ಸತತ 5ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

ಪಿಟಿಐ
Published 29 ಏಪ್ರಿಲ್ 2025, 4:23 IST
Last Updated 29 ಏಪ್ರಿಲ್ 2025, 4:23 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಸತತ ಐದನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ.

ಕಳೆದ ವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಈ ನಡುವೆ ಪಾಕಿಸ್ತಾನ ಎಲ್‌ಒಸಿ ಉದ್ಧಕ್ಕೂ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಜಮ್ಮು ಜಿಲ್ಲೆಯ ಅಖ್ನೂರ್ ವಲಯದ ಗಡಿಯಲ್ಲೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ. ಪಾಕ್‌ಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ತಕ್ಷಣಕ್ಕೆ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.

ಕುಪ್ವಾರ, ಬಾರಾಮುಲ್ಲಾ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ ನಡೆಸಿದ್ದ ಪಾಕ್, ಪೂಂಚ್ ಹಾಗೂ ಅಖ್ನೂರ್ ಸೆಕ್ಟರ್‌ನಲ್ಲೂ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.